ಹುಲುಕಡಿ ವೀರಭದ್ರ ಸ್ವಾಮಿ ದೇವಾಲಯದಲ್ಲಿ ವಿಜೃಂಭಣೆಯಿಂದ ದೀಪೋತ್ಸವ ಕಾರ್ಯಕ್ರಮ..

Spread the love

ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಇತಿಹಾಸ ಪ್ರಸಿದ್ಧ ಹುಲುಕುಡಿ ಕ್ಷೇತ್ರದಲ್ಲಿ ಕಾರ್ತಿಕ ಮಾಸದ ಕೊನೆ ಮಂಗಳವಾರ ದಿನದಂದು ಶ್ರೀ ವೀರಭದ್ರಸ್ವಾಮಿ ಮತ್ತು ಶ್ರೀ ಪ್ರಸನ್ನ ಭದ್ರಕಾಳಮ್ಮ ನವರ 13 ನೇ ವರ್ಷದ ಕಾರ್ತಿಕ ದೀಪೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ ವಿಜ್ರಂಭಣೆಯಿಂದ ನೆರವೇರಿತು.

ಸಾವಿರಾರು ಭಕ್ತಾದಿಗಳು ದೀಪೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು. ಕೊನೆಯಲ್ಲಿ ಭಕ್ತಾದಿಗಳಿಗೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ಟ್ರಸ್ಟ್ ವತಿಯಿಂದ ಸಕಲ ಸಿದ್ದತೆ
ಶ್ರೀ ಹುಲಿಕಡಿ ವೀರಭದ್ರ ಸ್ವಾಮಿ ದೇವಾಲಯ ಟ್ರಸ್ಟ್ ವತಿಯಿಂದ ದೀಪೋತ್ಸವಕ್ಕೆ ಬಂದಿದ್ದ ಭಕ್ತಾಧಿಗಳಿಗೆ ಅನ್ನದಾಸೋಹ, ದೀಪ ಹಚ್ಚಲು ಎಲ್ಲಾ ರೀತಿಯ ವ್ಯವಸ್ಥೆ, ದೊಡ್ಡಬಳ್ಳಾಪುರದಿಂದ ಹುಲುಕಡಿ ವೀರಭದ್ರ ಸ್ವಾಮಿ ದೇವಾಲಯಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು.

ಇನ್ನೂ ಈವೇಳೆ ಮಾತನಾಡಿದ ದೇವಾಲಯದ ಟ್ರಸ್ಟಿ ಚನ್ನೇಗೌಡ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಟ್ರಸ್ಟ್ ವತಿಯಿಂದ ದೇವಾಲಯದ ಬಳಿ ಭಕ್ತಾಧಿಗಳಿಗೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಗಳನ್ನ ಮಾಡಲಾಗಿದೆ. ಅಲ್ಲದೆ ದೇವಾಲಯ ಬರುವ ಭಕ್ತಾಧಿಗಳು ಯಾರೂ ಕೂಡ ಹಸಿವಿನಿಂದ ಹೋಗಬಾರದು ಎಂದು ಅನ್ನ ದಾಸೋಹ ಕೂಡ ಮಾಡಲಾಗಿದೆ. ಅಲ್ಲದೆ ದೀಪ ಹಚ್ಚಲು ತಾಲೂಕಿನಾದ್ಯಂತ ಸುಮಾರು ೩ ರಿಂದ ೫ ಸಾವಿರದಷ್ಟು ಜನರು ಸಂಜೆಯಿಂದಲೇ ಬಂದು ದೀಪ ಹಚ್ಚಿ ದೇವರ ಕೃಪೆಗೆ ಪಾತ್ರರಾದರು. ಇನ್ನೂ ಫೆಬ್ರವರಿ ತಿಂಗಳಲ್ಲಿ ಬಹಳ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನಡೆಯುತ್ತದೆ ಎಂದರು

Related posts

Leave a Comment