ಕಾರು ಮತ್ತು ಬಸ್ಸಿನ ನಡುವೆ ಅಪಘಾತ – ಐವರು ಸಾವು

Spread the love

ಕಾರು ಮತ್ತು ಸರ್ಕಾರಿ ಬಸ್ಸಿನ ನಡುವೆ ಭೀಕರ ಅಪಘಾತ- ಐವರು ಸಾವು

ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಧಾರುಣ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.

ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತರ ಪೈಕಿ ನಾಲ್ವರು ಮಂಗಳೂರು ಮೂಲದವರಾಗಿದ್ದು ಓರ್ವ ತಮಿಳುನಾಡು ಮೂಲದವನಾಗಿದ್ದಾನೆ.

ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Related posts

Leave a Comment