ಬಸ್ ಗೆ ಬೆಂಕಿ, ತಪ್ಪಿದ ಬಾರೀ ಅನಾಹುತಾ..

Spread the love

ವಿಜಯಪುರ: ಟೈರ್ ಬ್ಲಾಸ್ಟ್‌ ಆಗಿ ಹೊತ್ತಿ ಉರಿದ ಬಸ್- ತಪ್ಪಿದ‌ ಭಾರೀ ಅನಾಹುತ- ಕ್ಷಣ ಮಾತ್ರದಲ್ಲಿ ಪ್ರಾಣಾಪಯದಿಂದ ಪಾರಾದ ಪ್ರಯಾಣಿಕರು

ಜನತಾ ಟ್ರಾವೆಲ್ಸ್ ಗೆ ಸೇರಿದ ಬಸ್ಸಿನ ಟೈರ್ ಆಕಸ್ಮಿಕವಾಗಿ ಬ್ಲಾಸ್ಟ್ ಆಗಿ‌ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ‌ ವಿಜಯಪುರ ತಾಲೂಕಿನ ಹಿಟ್ಟನಹಳ್ಳಿ ಬಳಿ ಎಚ್ 50 ರಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದ ವೇಳೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಕ್ಷಣ ಮಾತ್ರದಲ್ಲಿ ಇಡೀ ಬಸ್ಸಿಗೆ ಬೆಂಕಿ ವ್ಯಾಪಿಸಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಗಾಬರಿಗೊಂಡ ಪ್ರಯಾಣಿಕರು ಕೆಳಗಿಳಿದು ತಮ್ಮ ಪ್ರಾಣ ಕಾಪಾಡಿಕೊಂಡಿದ್ದಾರೆ.

ಬೆಂಕಿಯ ಕೆನ್ನಾಲಿಗೆಗೆ ಪ್ರಯಾಣಿಕರ ಲಗೇಜ್, ಬೆಲೆ ಬಾಳುವ ವಸ್ತುಗಳು, ಬಟ್ಟೆಗಳು, ನಗದು ಒಡವೆ ಭಸ್ಮವಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು, ಅಗ್ನಿ ಶಾಮಕ‌ದಳ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

Leave a Comment